ವಿಶ್ವ ಹೃದಯ ದಿನಾಚರಣೆ ಅಂಗವಾಗಿವಿದ್ಯಾರ್ಥಿಗಳಿಗೆ ಜಾಗೃತಿ

Spread the love

ಮೈಸೂರು: ಎಸ್ ಪ್ರಕಾಶ್ ಪ್ರಿಯಾದರ್ಶನ್ ಸ್ನೇಹ ಬಳಗದ ವತಿಯಿಂದ ವಿಶ್ವ ಹೃದಯ ದಿನಾಚರಣೆ ಪ್ರಯುಕ್ತ ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸಲಾಯಿತು.

ಕೆ.ಆರ್.ಮೊಹಲ್ಲ, ಬಿ.ಬಿ. ಲಾಯ ದಲ್ಲಿರುವ ಶಿವಶ್ರೀ ವಿದ್ಯಾರ್ಥಿನಿಯರ ನಿಲಯದ ಬಂಧುಗಳಿಗೆ ಹಣ್ಣುಗಳು ಹಾಗೂ ಲೇಖನಿ ಸಾಮಗ್ರಿಗಳನ್ನು ವಿತರಿಸಿ ಹೃದಯದ ಆರೋಗ್ಯದ ಬಗ್ಗೆ ಜಾಗೃತಿ ನೀಡಲಾಯಿತು.

ಈ ವೇಳೆ ಮಾತನಾಡಿದ ಜೆಡಿಎಸ್ ಕಾರ್ಯಧ್ಯಕ್ಷ ಎಸ್ ಪ್ರಕಾಶ್ ಪ್ರಿಯದರ್ಶನ್, ಹೃದಯ ದೇಹಕ್ಕೆ ಅತ್ಯಂತ ಪ್ರಮುಖ ಅಂಗವಾಗಿದ್ದು ನಮ್ಮ ದೇಹದ ಪ್ರತಿಯೊಂದು ಅಂಗಗಳಿಗೆ ರಕ್ತ ಆಕ್ಸಿಜನ್ ಪೂರೈಸುವುದರ ಮೂಲಕ ಎಲ್ಲ ಅಂಗಳು ಆರೋಗ್ಯವಾಗಿ ಕೆಲಸ ನಿರ್ವಹಿಸಲು ಕಾರಣವಾಗಿರುತ್ತದೆ ಎಂದು ತಿಳಿಸಿದರು.

ಪ್ರಸ್ತುತ ನಮ್ಮ ಜೀವನ ಶೈಲಿ, ಆಹಾರ ಪದ್ಧತಿ, ತಂಬಾಕು ಉತ್ಪನ್ನಗಳ ಸೇವನೆಯಿಂದಾಗಿ ಹೃದಯ ಸಂಬಂಧಿ ಕಾಯಿಲೆಗಳು ಹೆಚ್ಚುತ್ತಿದ್ದು, ಇದನ್ನು ಕಾಪಾಡಿಕೊಳ್ಳುವುದು ನಮ್ಮ ಕೈಯಲ್ಲಿದೆ. ನಾವು ಆರೋಗ್ಯಯುತವಾಗಿರುವುದೇ ಈ ಸಮಾಜಕ್ಕೆ ನೀಡುವ ಕೊಡುಗೆ ಎಂದು ತಿಳಿಸಿದರು.

ಈ ವೇಳೆ ಶಿವಶ್ರೀ ವಿದ್ಯಾರ್ಥಿನಿಯರ ನಿಲಯದ ಮುಖ್ಯಸ್ಥರಾದ ಪ್ರಭಾಮಣಿ, ಹೊಯ್ಸಳ ಕರ್ನಾಟಕ ಸಂಘದ ನಿರ್ದೇಶಕ ರಂಗನಾಥ್, ವೀರಭದ್ರ ಸ್ವಾಮಿ,ಮಹೇಶ್, ಎಸ್‌.ಪಿ. ಅಕ್ಷಯ್ ಪ್ರಿಯಾದರ್ಶನ್ ಮತ್ತಿತರರು ಉಪಸ್ಥಿತರಿದ್ದರು.