ಮೈಸೂರು: ವಿಶ್ವ ಪ್ರವಾಸೋದ್ಯಮ ದಿನದ ಅಂಗವಾಗಿ ಮೈಸೂರು ಮೃಗಾಲಯದ ಪ್ರವಾಸಿಗರಿಗೆ ಮೈಸೂರು ಪಾಕ್ ಮತ್ತು ಗುಲಾಬಿ ನೀಡಿ ಶುಭ ಕೋರಲಾಯಿತು.
ಚಾಮುಂಡೇಶ್ವರಿ ಯುವ ಬಳಗದ ವತಿಯಿಂದ ಮೈಸೂರು ಮೃಗಾಲಯದಲ್ಲಿ
ಮೈಸೂರು ಪಾಕ್ ಹಾಗೂ ಗುಲಾಬಿ ವಿತರಿಸುವ ಮೂಲಕ ಪ್ರವಾಸೋದ್ಯಮ ದಿನವನ್ನು ಆಚರಿಸಲಾಯಿತು.
ಈ ಸಂದರ್ಭದಲ್ಲಿ ಕೆಪಿಸಿಸಿ ಅಧ್ಯಕ್ಷರಾದ ನಜರ್ಬಾದ್ ನಟರಾಜ್, ಕಾಂಗ್ರೆಸ್ ಮುಖಂಡರಾದ ರಮೇಶ್ ರಾಮಪ್ಪ, ಲೋಕೇಶ್, ಎಸ್ ಎನ್ ರಾಜೇಶ್, ರವಿಚಂದ್ರ, ಕಡಕೋಳ ಶಿವು, ದಿನೇಶ್, ಮಹಾನ್ ಶ್ರೇಯಸ್ ಮತ್ತಿತರರು ಹಾಜರಿದ್ದರು.