ನವದೆಹಲಿ: ಕೇಂದ್ರ ವಾಣಿಜ್ಯ ಸಚಿವ ಪಿಯೂಷ್ ಗೋಯಲ್ ಅವರನ್ನು ಭೇಟಿ ಮಾಡಿ ಪರವಾನಗಿ ರಹಿತ ತಂಬಾಕು ಬೆಳೆಗಾರರಿಗೆ ಮಾರಾಟಕ್ಕೆ ಅವಕಾಶ ಮಾಡಿಕೊಡಬೇಕೆಂದು ಮನವಿ ಮಾಡಿರುವುದಾಗಿ ಸಂಸದ ಯದುವೀರ್ ಒಡೆಯರ್ ತಿಳಿಸಿದ್ದಾರೆ.
ಪರವಾನಗಿ ರಹಿತ ತಂಬಾಕು ಬೆಳೆಗಾರರ ಮೇಲೆ ವಿಧಿಸಲಾಗುತ್ತಿದ್ದ ದಂಡವನ್ನು ಮನ್ನಾ ಮಾಡಬೇಕೆಂದು ಮನವಿ ಸಲ್ಲಿಸಿದ್ದೇನೆ ಎಂದು ಹೇಳಿದ್ದಾರೆ.
ನವದೆಹಲಿಯಲ್ಲಿ ಕೇಂದ್ರ ವಾಣಿಜ್ಯ ಸಚಿವ ಪಿಯೂಷ್ ಗೋಯಲ್ ಅವರನ್ನು ಭೇಟಿ ಮಾಡಿದ ನಂತರ ಸಂಸದರು ಮಾಧ್ಯಮಗಳಿಗೆ ಮಾಹಿತಿ ನೀಡಿದರು.
ಇದಕ್ಕೆ ಸೂಕ್ತವಾಗಿ ಸ್ಪಂದಿಸಿದ ಸಚಿವರಾದ ಪಿಯೂಷ್ ಗೋಯಲ್, ಕಾರ್ಡ್ ಹೊಂದಿರದ (ಪರವಾನಗಿ ರಹಿತ) ತಂಬಾಕು ಬೆಳೆಗಾರರು ತಮ್ಮ ಉತ್ಪನ್ನಗಳನ್ನು ಮಾರಾಟ ಮಾಡಲು ಅವಕಾಶ ಕಲ್ಪಿಸುವ ಕುರಿತು ಭರವಸೆ ನೀಡಿದ್ದಾರೆ ಎಂದು ತಿಳಿಸಿದರು.
ಪರವಾನಗಿ ತಂಬಾಕು ಬೆಳೆಗಾರರಿಗೆ ವಿಧಿಸುತ್ತಿದ್ದ ದಂಡವನ್ನು ಮನ್ನಾ ಮಾಡುವ ಸಂಬಂಧ ತಂಬಾಕು ಮಂಡಳಿಗೆ ಸೂಕ್ತ ನಿರ್ದೇಶನ ನೀಡುವುದಾಗಿಯೂ ಭರವಸೆ ನೀಡಿದ್ದಾರೆ ಎಂದು ಯದುವೀರ್ ತಿಳಿಸಿದರು.
ಅತಿ ಶೀಘ್ರದಲ್ಲೇ ನಿರ್ಧಾರ ಹೊರಬೀಳುವ ನಿರೀಕ್ಷೆ ಇದೆ ಎಂದು ವಿಶ್ವಾಸ ವ್ಯಕ್ತಪಡಿಸಿದರಲ್ಲದೆ ನಮ್ಮ ಕ್ಷೇತ್ರದ ಬೆಳಗಾರರ ಪರವಾಗಿ ದನಿ ಎತ್ತಲು ನಾನು ಸದಾ ಬದ್ಧನಾಗಿದ್ದೇನೆ ಎಂದು ಯದುವೀರ್ ಭರವಸೆ ನೀಡಿದರು.