ಚಾಮರಾಜನಗರ: ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಿದ್ದ ವ್ಯಕ್ತಿಯನ್ನು ಯಳಂದೂರು ಠಾಣೆ ಪೊಲೀಸರು ಬಂಧಿಸಿದ್ದಾರೆ.
ವೀರಣ್ಣ ಅಲಿಯಾಸ್ ವೀರು ಬಂಧಿತ ಆರೋಪಿ.
ಯಳಂದೂರು ತಾಲ್ಲೂಕಿನ ಮಸಣಾಪುರ ಗ್ರಾಮದಲ್ಲಿ ನಡೆದ ಡಾ. ಬಿ.ಆರ್ ಅಂಬೇಡ್ಕರ್ ಪ್ರತಿಮೆಗೆ ಕಿಡಿಗೇಡಿಗಳು ಅಪಮಾನ ಮಾಡಿರುವ ವಿಚಾರವಾಗಿ ಡಿಜಿಟಲ್ ಮಾಧ್ಯಮವೊಂದರ ಫೇಸ್ಬುಕ್ ಖಾತೆಯಲ್ಲಿ ನ್ಯೂಸ್ ಪ್ರಚಾರವಾಗಿತ್ತು.
ಅದರ ಕಮೆಂಟ್ ಬಾಕ್ಸ್ನಲ್ಲಿ Veeranna veeru ಎಂಬ ಪೇಸ್ಬುಕ್ ಖಾತೆಯಿಂದ ವೀರಣ್ಣ ಅವಹೇಳನಕಾರಿಯಾಗಿ ಕಾಮೆಂಟ್ ಹಾಕಿದ್ದ.
ಮತ್ತೊಬ್ಬರ ಮೇಲೆ ಅವಹೇಳನಕಾರಿಯಾಗಿ ಕಾಮೆಂಟ್ ಮಾಡಿದರೆ ಸಮಾಜದ ಸ್ವಾಸ್ಥ್ಯ ಹಾಳಾಗುತ್ತದೆ ಹಾಗೂ ಜಾತಿ-ಜಾತಿ ನಡುವೆ ಕೋಮು ಸಂಘರ್ಷ ಉಂಟಾಗುತ್ತದೆ ಎಂಬ ವಿಚಾರ ತಿಳಿದಿದ್ದರೂ ಕೂಡ ಸಮಾಜದ ಸ್ವಾಸ್ಥ್ಯವನ್ನು ಹಾಳುಮಾಡುವ ಉದ್ದೇಶದಿಂದ ಅವಹೇಳನಕಾರಿಯಾಗಿ ಪೇಸ್ಬುಕ್ ಪೇಜ್ನಲ್ಲಿ ಕಾಮೆಂಟ್ ಹಾಕಿದ ಹಿನ್ನೆಲೆಯಲ್ಲಿ ವೀರಣ್ಣ ವೀರು ಮೇಲೆ ಯಳಂದೂರು ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಈ ಕಾರ್ಯಕ್ಕೆ ಪೊಲೀಸ್ ಅಧೀಕ್ಷಕರಾದ ಮುತ್ತುರಾಜು.ಎಂ ಅವರು ಪ್ರಶಂಸನೆ ವ್ಯಕ್ತಪಡಿಸಿ, ಮುಂದಿನ ದಿನಗಳಲ್ಲಿಯೂ ಸಮಾಜದ ಸ್ವಾಸ್ಥ್ಯವನ್ನು ಹಾಳು ಮಾಡುವಂತ ವ್ಯಕ್ತಿಗಳನ್ನು ಪತ್ತೆ ಹಚ್ಚಿ ನಿಗ್ರಹಿಸುವಂತೆ ಸೂಚನೆ ನೀಡಿದ್ದಾರೆ.
