ಯಳಂದೂರು: ಯಳಂದೂರು ಪಟ್ಟಣದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಯಳಂದೂರು ತಾಲೂಕು ಆಡಳಿತ, ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಶ್ರೀ ವಿಶ್ವಕರ್ಮ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಗಣ್ಯರು ವಿಶ್ವಕರ್ಮರ ಭಾವಚಿತ್ರಕ್ಕೆ ಪುಷ್ಪ ನಮನ ಮಾಡಿದರು.
ನಂತರ ಮುಖ್ಯ ಭಾಷಣಕಾರರಾಗಿ ಭಾಗವಹಿಸಿದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಇತಿಹಾಸ ಉಪನ್ಯಾಸಕರಾದ ಎಸ್ ಪುಷ್ಪಲತಾ ಅವರು ಮಾತನಾಡಿ ವಿಶ್ವಕರ್ಮ ಜಯಂತಿ ಒಂದು ಜನಾಂಗಕ್ಕೆ ಸೀಮಿತವಾಗಿರುವುದು ದುರಂತ ಎಂದು ವಿಷಾದಿಸಿದರು.
ಕಲೆ, ವಾಸ್ತುಶಿಲ್ಪ ಕ್ಷೇತ್ರಕ್ಕೆ ವಿಶ್ವಕರ್ಮ ಸಮುದಾಯದ ಕೊಡುಗೆ ಅಪಾರವಾದುದು. ವಿಶ್ವಕರ್ಮ ಸಮುದಾಯವು ಕಲೆ ಮತ್ತು ವಾಸ್ತುಶಿಲ್ಪ ಕ್ಷೇತ್ರಕ್ಕೆ ಅವಿಸ್ಮರಣೀಯ ಕೊಡುಗೆ ನೀಡಿದೆ ಪ್ರತಿನಿತ್ಯ ಜನರು ಬಳಸುವ ಕರಕುಶಲ ಸಾಮಗ್ರಿಗಳು, ಲೋಹ, ಕಬ್ಬಿಣ, ದೇವರ ವಿಗ್ರಹ, ಚಿತ್ರಪಟಗಳು, ಗೃಹಬಳಕೆ ವಸ್ತುಗಳು, ಸ್ಮಾರಕಗಳ ನಿರ್ಮಾಣದ ಕಾರ್ಯದಲ್ಲಿ ವಿಶ್ವಕರ್ಮರ ಕಲೆ ಜೀವಂತಿಕೆ ಇಂದಿಗೂ ಉಳಿಸಿರುವುದೇ ಸಾಕ್ಷಿ.
ಎಂದು ಹೇಳಿದರು.
ಲೋಕವನ್ನು ವೈಭವೀಕರಿಸುವ ಸಾಂಸ್ಕೃತಿಕ ಪರಂಪರೆ, ಕಲೆ ಮತ್ತು ವಾಸ್ತಶಿಲ್ಪ ಕ್ಷೇತ್ರಕ್ಕೆ ವಿಶ್ವಕರ್ಮರ ಕೊಡುಗೆ ಅಪಾರವಾಗಿದೆ,
ವಿಶ್ವಕರ್ಮ ಸಮುದಾಯಕ್ಕೆ ಸರ್ಕಾರದಿಂದ ಸಿಗುವ ಸೌಲಭ್ಯಗಳನ್ನು ತಲುಪಿಸಲು ಪೂರಕವಾದ ವ್ಯವಸ್ಥೆ ಕಲ್ಪಿಸಿದಲ್ಲಿ ಸಮುದಾಯವು ಆರ್ಥಿಕವಾಗಿ ಅಭಿವೃದ್ಧಿ ಹೊಂದಲು ಸಾಧ್ಯ ಎಂದು ತಿಳಿಸಿದರು.
ಪ್ರತಿಯೊಬ್ಬ ನಾಗರಿಕರು ವಿಶ್ವಕರ್ಮರ ಆದರ್ಶ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಂಡಾಗ ಮಾತ್ರ ದೇಶದ ಅಭಿವೃದ್ಧಿಗೆ ಪೂರಕವಾಗಲಿದೆ ಎಂದು ಪುಷ್ಪಲತಾ ತಿಳಿಸಿದರು.
ಜಿಲ್ಲಾ ಗ್ಯಾರೆಂಟಿ ಯೋಜನೆಗಳ ಜಿಲ್ಲಾಧ್ಯಕ್ಷರಾದ ಹೆಚ್. ವಿ . ಚಂದ್ರು, ತಾಲೂಕು ಗ್ಯಾರೆಂಟಿ ಯೋಜನೆ ಅಧ್ಯಕ್ಷರಾದ ಪ್ರಭು ಪ್ರಸಾದ್, ತಹಸಿಲ್ದಾರ್ ಎಸ್. ಎಲ್ ನಯನ ಮಾತನಾಡಿದರು.
ಕಾರ್ಯಕ್ರಮದಲ್ಲಿ ವಿಶ್ವಕರ್ಮ ಸಮಾಜದ ತಾಲೂಕ ಅಧ್ಯಕ್ಷ ನಾಗರಾಜು, ಪಟ್ಟಣ ಪಂಚಾಯಿತಿ ಪ್ರಭಾರ ಮುಖ್ಯ ಅಧಿಕಾರಿ ಮಹದೇವ ನಾಯಕ, ಕೃಷಿ ಇಲಾಖೆ ಸಹಾಯಕ ನಿರ್ದೇಶಕರಾದ ಅಮೃತೇಶ್, ಶಿಕ್ಷಣ ಇಲಾಖೆ ಬಿ ಆರ್ ಪಿ ರೇಚಣ್ಣ, ಶಿವಣ್ಣಚಾರಿ ತಾಲೂಕಿನ ವಿಶ್ವಕರ್ಮ ಸಮಾಜದ ಮುಖಂಡರು, ಯುವಕರು, ವಿವಿಧ ಇಲಾಖೆ ಅಧಿಕಾರಿಗಳು ಸಾರ್ವಜನಿಕರು ಭಾಗವಹಿಸಿದ್ದರು.
