ಯಲ್ಲಾಪುರ: ಉತ್ತರ ಕನ್ನಡ ಜಿಲ್ಲೆಯ ಯಲ್ಲಾಫುರ ಬಳಿ ಬುಧವಾರ ಮುಂಜಾನೆ ತರಕಾರಿ ಸಾಗಿಸುತ್ತಿದ್ದ ಲಾರಿ ಉರುಳಿಬಿದ್ದ ಪರಿಣಾಮ 11 ಮಂದಿ ಮೃತಪಟ್ಟಿರುವ ಘಟನೆ ನಡೆದಿದೆ.
ಹಲವಾರು ಮಂದಿ ಗಾಯಗೊಂಡಿದ್ದು ಕೆಲವರ ಸ್ಥಿತಿ ಚಿಂತಾಜನಕವಾಗಿದೆ.ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸ್ಥಳಕ್ಕೆ ಯಲ್ಲಾಪುರ ಪೊಲೀಸರು ಭೇಟಿ ನೀಡಿ ಪರಿಶೀಲಿಸಿ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲು ನೆರವಾದರು.
ಘಟನೆಗೆ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ.
ಈ ಭೀಕರ ಘಟನೆಗೆ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ.
ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ಮೃತಪಟ್ಟವರ ಕುಟುಂಬಸ್ಥರಿಗೆ ತಲಾ 2 ಲಕ್ಷ ರೂ. ಪರಿಹಾರ ನೀಡುವುದಾಗಿ ಪ್ರಧಾನಿ ಮೋದಿ ಘೋಷಿಸಿದ್ದಾರೆ. ರಾಜ್ಯ ಸರ್ಕಾರ ಈಗಾಗಲೇ ತಲಾ 3 ಲಕ್ಷ ರೂ. ಪರಿಹಾರ ಘೋಷಿಸಿದೆ.
ಉತ್ತರ ಕನ್ನಡ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಅಪಘಾತದಿಂದ ತೀವ್ರ ದುಃಖಿತನಾಗಿದ್ದೇನೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಸಂತಾಪ ಸೂಚಿಸುತ್ತೇನೆ ಎಂದು ಪ್ರಧಾನಿ ಮೋದಿ ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದಾರೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಕೂಡಾ ಈ ಅಪಘಾತಕ್ಕೆ ಸಂತಾಪ ಸೂಚಿಸಿದ್ದಾರೆ. ಉತ್ತರ ಕನ್ನಡದ ಯಲ್ಲಾಪುರ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಅಮೂಲ್ಯ ಜೀವಗಳು ಬಲಿಯಾಗಿದ್ದು, ಈ ಘಟನೆಯಿಂದ ಬಹಳ ದುಃಖವಾಗಿದೆ, ಗಾಯಗೊಂಡವರು ಶೀಘ್ರವಾಗಿ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದಾರೆ.