ಮೈಸೂರು: ಡಾ. ಯತೀಂದ್ರ ಸಿದ್ದರಾಮಯ್ಯ ಹಾಗೂ ಸಿಎಂ ಸಿದ್ದರಾಮಯ್ಯ ಅವರ ಮನೆಗೆ ಶ್ರೀ ನಾಲ್ವಡಿ ಅವರ ಜೀವನ ಚರಿತ್ರೆ ಪುಸ್ತಕವನ್ನು ಪೋಸ್ಟ್ ಮಾಡುವ ಮೂಲಕ
ಬಿಜೆಪಿ ಮುಖಂಡ ದಿನೇಶ್ ಗೌಡ ವಿಶೇಷವಾಗಿ ಯತೀಂದ್ರ ಅವರಿಗೆ ಚುರುಕು ಮುಟ್ಟಿಸಿದ್ದಾರೆ.
ನಗರದ ಲಷ್ಕರ್ ವೃತ್ತದಲ್ಲಿರುವ ಕೇಂದ್ರ ಅಂಚೆ ಕಚೇರಿಯಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರಗಿಂತಲೂ ಸಿದ್ದರಾಮಯ್ಯ ಅಭಿವೃದ್ಧಿ ಮಾಡಿದ್ದಾರೆ ಎಂದು ಹೇಳಿಕೆ ನೀಡಿದ ಡಾ ಯತೀಂದ್ರ ಸಿದ್ದರಾಮಯ್ಯ ಅವರನ್ನು ವಿರೋಧಿಸಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಜೀವನದ ಕೊಡುಗೆಗಳ ಪುಸ್ತಕವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಸುಪುತ್ರ ಯತೀಂದ್ರ ಸಿದ್ದರಾಮಯ್ಯ ಅವರ ನಿವಾಸಕ್ಕೆ ಪೋಸ್ಟ್ ಮಾಡುವ ಮೂಲಕ ನಾಲ್ವಡಿ ಕೃಷ್ಣರಾಜ ಕೊಡುಗೆಗಳನ್ನು ತಿಳಿದುಕೊಳ್ಳುವಂತೆ ದಿನೇಶ್ ಗೌಡ ತಿರುಗೇಟು ಕೊಟ್ಟಿದ್ದಾರೆ.
ಈ ವೇಳೆ ಮಾತನಾಡಿದ ದಿನೇಶ್ ಗೌಡ ಅವರು, ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಹೆಸರು ಹೇಳುವ ಯೋಗ್ಯತೆ ಆದರೂ ಯತೀಂದ್ರ ಅವರಿಗೆ ಇದೆಯಾ ಎಂದು ಕಾರವಾಗಿ ಪ್ರಶ್ನಿಸಿದರು.
ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಆಧುನಿಕ ಭಗೀರಥ, ಅಂತಹವರ ಬಗ್ಗೆ ಹೋಲಿಕೆ ಮಾಡುತ್ತೀರಲ್ಲ,ಮೊದಲು
ನಾಲ್ವಡಿ ಕೃಷ್ಣರಾಜ ಒಡೆಯರ್ ಬಗೆಗಿನ ಪುಸ್ತಕವನ್ನು ಓದಿ ತಿಳಿದುಕೊಂಡು ನಂತರ ಸಾರ್ವಜನಿಕವಾಗಿ ಹೇಳಿಕೆ ನೀಡಬೇಕು ಎಂದು ತಿರುಗೇಟು ನೀಡಿದರು.
ಮೊದಲು ಮೈಸೂರಿನ ಅಭಿವೃದ್ಧಿಯ ಬಗ್ಗೆ ಮಾತನಾಡಿ, ನಿಮ್ಮ ತಂದೆಯವರ ಅಭಿವೃದ್ಧಿ ಏನು ಎಂದು ನಿಮಗೆ ನೀವೇ ಪ್ರಶ್ನೆಸಿಕೊಳ್ಳಿ, ನಿಮ್ಮ ಪಕ್ಷದ ಒಳ ಜಗಳಗಳ ಬಗ್ಗೆ ಮಾತನಾಡಿ, ಅದನ್ನು ಬಿಟ್ಟು
ನಾಲ್ವಡಿ ಕೃಷ್ಣರಾಜ ಒಡೆಯರ ಬಗ್ಗೆ ಮಾತನಾಡುತ್ತೀರಲ್ಲ ನಾಚಿಕೆಯಾಗುವುದಿಲ್ಲವೇ,
ಈ ಕೂಡಲೇ ಬಹಿರಂಗವಾಗಿ ಕ್ಷಮೆಯಾಚಿಸಬೇಕೆಂದು ಯತೀಂದ್ರ ಅವರನ್ನು ದಿನೇಶ್ ಗೌಡ ಒತ್ತಾಯಿಸಿದರು
ಚಾಮರಾಜ ವಿಧಾನಸಭಾ ಕ್ಷೇತ್ರದ ಅಧ್ಯಕ್ಷರಾದ ದಿನೇಶ್ ಗೌಡ, ಯುವ ಮೋರ್ಚಾ ಅಧ್ಯಕ್ಷರಾದ ಅರ್ಜುನ್, ಪ್ರಧಾನ ಕಾರ್ಯದರ್ಶಿಗಳಾದ ನಿಖಿಲ್, ಮಂಜು,ಪಂಕಜ್,ಶ್ರೀನಿವಾಸ್, ಸೂರ್ಯ,ಪ್ರವೀಣ್ ಶೆಟ್ಟಿ ಮುಂತಾದವರು ಹಾಜರಿದ್ದರು.