ಮೈಸೂರು: ಮೈಸೂರಿನ ವಿಜಯನಗರದಲ್ಲಿರುವ ಶ್ರೀ ಯಾಗಾನರಸಿಂಹ ಸ್ವಾಮಿದೇವಾಲಯದ ರಾಜಗೋಪುರ ನಿರ್ಮಾಣಕ್ಕೆ ಗುರುವಾರ ಚಾಲನೆ ನೀಡಲಾಯಿತು.
ದೇವಾಲಯದ ಸಂಸ್ಥಾಪಕರಾದ ನಾಡೋಜ ಪ್ರೊ.ಡಾ.ಭಾಷ್ಯಂ ಸ್ವಾಮೀಜಿ ಅವರು, ರಾಜಗೋಪುರ ನಿರ್ಮಾಣ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದರು.
ಗುರುವಾರ ಬೆಳಗ್ಗಿನಿಂದಲೇ ಶ್ರೀ ಸ್ವಾಮಿಗೆ ವಿಶೇಷ ಪೂಜಾ-ಕೈಂಕರ್ಯಗಳು ಜರುಗಿತಲ್ಲದೇ, ೧೦.೩೦ರಿಂದ ೧೧.೦೦ ಗಂಟೆಯ ಒಳಗೆ ಸಲ್ಲುವ ಶುಭ ಲಗ್ನದಲ್ಲಿ ವಿಧಿ-ವಿಧಾನಗಳಂತೆ ರಾಜಗೋಪುರ ನಿರ್ಮಾಣ ಕಾರ್ಯಕ್ಕೆ ಶ್ರೀಗಳು ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಭಾಷ್ಯಂ ಸ್ವಾಮೀಜಿ ಅವರು, ಯೋಗಾನರಸಿಂಹ ದೇವಾಲಯವನ್ನು ಮತ್ತಷ್ಟು ಅಭಿವೃದ್ದಿಗೊಳಿಸಿ, ಭಕ್ತರಿಗೆ ಸಕಲ-ಸೌಲಭ್ಯಗಳನ್ನು ಕಲ್ಪಿಸಲು ಮುಂದಾಗಿದ್ದೆರವೆ ಎಂದು ತಿಳಿಸಿದರು.
ದೇಗುಲದ ರಾಜಗೋಪುರ ನಿರ್ಮಾಣಕ್ಕೆ ಚಾಲನೆ ನೀಡಲಾಗಿದೆ. ಭಕ್ತಾದಿಗಳು ದೇವಾಲಯಕ್ಕೆ ಆಗಮಿಸಿ ದೇವರ ದರ್ಶನ ಪಡೆದು ಪುನೀತರಾಗಬೇಕೆಂದು ಹೇಳಿದರು.
ಇದೇ ವೇಳೆ ದೇವಸ್ಥಾನಕ್ಕೆ ಆಗಮಿಸಿದ ಎಲ್ಲಾ ಭಕ್ತಾದಿಗಳಿಗೂ ಅನ್ನಸಂತರ್ಪಣೆ ಪ್ರಸಾದ ವ್ಯವಸ್ಥೆಯನ್ನು ಕಲ್ಪಿಸಲಾಗಿತ್ತು.
ದೇವಾಲಯದ ಆಡಳಿತಾಧಿಕಾರಿ ಎನ್.ಶ್ರೀನಿವಾಸನ್, ಪ್ರಧಾನ ಅರ್ಚಕರಾದ ಶೇಷಾದ್ರಿ ಮತ್ತಿತರ ಗಣ್ಯರು ಹಾಜರಿದ್ದರು.
