ಮೈಸೂರು: ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಅಧ್ಯಕ್ಷರಾದ ಎಸ್.ರಘುನಾಥ್ ಅವರು ವಿಜಯನಗರದ ಶ್ರೀ ಯೋಗಾನರಸಿಂಹ ಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿ ಶ್ರೀ ಸ್ವಾಮಿಯ ದರ್ಶನ ಪಡೆದರು.
ರಘುನಾಥ್ ಅವರು
ಸುವರ್ಣ ವಿಪ್ರ ಮಿಲನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಮೈಸೂರಿಗೆ ಆಗಮಿಸಿದ್ದರು.
ಈ ಸಂದರ್ಭದಲ್ಲಿ ಅವರು ವಿಜಯನಗರದ ಶ್ರೀ ಯೋಗಾನರಸಿಂಹ ಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿ ಶ್ರೀ ಸ್ವಾಮಿಯ ದರ್ಶನ ಪಡೆದರು.
ಈ ವೇಳೆ ದೇವಾಲಯದ ಸಂಸ್ಥಾಪಕರಾದ ಪ್ರೊ.ಡಾ.ಭಾಷ್ಯಂ ಸ್ವಾಮೀಜಿ ಅವರು ರಘುನಾಥ್ ಅವರನ್ನು ಆತ್ಮೀಯವಾಗಿ ಸ್ವಾಗತಿಸಿ,ಗೌರವಿಸಿದರು.
ಈ ಸಂದರ್ಭದಲ್ಲಿ ದೇವಾಲಯದ ಆಡಳಿತಾಧಿಕಾರಿ ಎನ್.ಶ್ರೀನಿವಾಸನ್, ಬ್ರಾಹ್ಮಣ ಮಹಾಸಭಾದ ರಾಜ್ಯ ಉಪಾಧ್ಯಕ್ಷ ನಂ.ಶ್ರೀಕಂಠಕುಮಾರ್,ರಥಯಾತ್ರೆ ಸುರೇಶ್, ರಾಜಶೇಖರ್, ದಿಲೀಪ್, ಪುರುಷೋತ್ತಮ್,ಜಿ.ಆರ್.ಮೋಹನ್,ಎನ್.ಶ್ರೀನಿವಾಸ್ ಪ್ರಸಾದ್ ಮತ್ತಿತರರು ಹಾಜರಿದ್ದರು.