ಮೈಸೂರು: ಸಚಿವ ಸಂಪುಟ ವಿಸ್ತರಣೆಯಲ್ಲಿ ಸ್ಥಾನ ಕೈತಪ್ಪಿದೆ ಎಂದು ಆಕ್ರೋಶ ವ್ಯಕ್ತಪಡಿಸಿ, ಶಾಸಕ ತನ್ವೀರ್ ಸೇಠ್ ಅವರ ನಿವಾಸದ ಬಳಿ ಬೆಂಬಲಿಗರು ಹಾಗೂ ಯೂತ್ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಕಾರ್ಯಕರ್ತರು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಇದ ವೇಳೆ ಸಚಿವ ಸ್ಥಾನ ನೀಡದಿರುವುದಕ್ಕೆ ಬೇಸರಗೊಂಡ ಕಾರ್ಯಕರ್ತ ಕೀಟನಾಶಕ ಸೇವಿಸಿದ್ದು ಅವರನ್ನು ತಕ್ಷಣ ಆಸ್ಪತ್ರೆಗೆ ರವಾನಿಸಲಾಯಿತು.
ಕಾರ್ಯಕರ್ತರು ರಾಜೀನಾಮೆ ಕೊಟ್ಟುಬಿಡಿ ಸರ್, ಪಕ್ಷವಿರೋಧಿಗಳಿಗೆ ಸಚಿವ ಸ್ಥಾನ ನೀಡುತ್ತಾರೆ, ನಮಗೇಕೆ ನ್ಯಾಯ ಇಲ್ಲ?, “ಪೇಮೆಂಟ್ ಗಿರಾಕಿಗಳಿಗೆ ಮಂತ್ರಿಗಿರಿ, ನಿಷ್ಠಾವಂತರಿಗೆ ಅನ್ಯಾಯ” ಎಂದು ಘೋಷಣೆ ಕೂಗಿ ಆಕ್ರೋಶ ದಿಂದ ಘೋಷಣೆ ಕೂಗಿದರು.
ನೀವೇನೂ ತಪ್ಪು ಮಾಡಿಲ್ಲ. ನೆನ್ನೆ-ಮೊನ್ನೆ ಬಂದವರಿಗೆ, ಪಕ್ಷಕ್ಕೆ ಮೋಸ ಮಾಡಿದವರಿಗೆ ಸ್ಥಾನ ಕೊಡುತ್ತಾರೆ. ಇಂತಹ ಪರಿಸ್ಥಿತಿಯಲ್ಲಿ ಪಕ್ಷದಲ್ಲಿ ಮುಂದುವರಿಯುವುದಕ್ಕೆ ಅರ್ಥವೇ ಇಲ್ಲ ಎಂದು ಬೆಂಬಲಿಗರು ತನ್ವೀರ್ ಸೇಠ್ ಅವರಿಗೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಆಗ್ರಹಿಸಿದರು.
ಹೈಕಮಾಂಡ್ ನಿರ್ಧಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ ಕಾರ್ಯಕರ್ತರು,ಅನ್ಯಾಯದ ವಿರುದ್ಧ ಕಠಿಣ ನಿಲುವು ತಾಳಬೇಕು. ಅಗತ್ಯವಿದ್ದರೆ ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡಿ ಹೋರಾಟ ನಡೆಸಿ ಎಂದು ಹೇಳಿದರು.
ಇದಲ್ಲಾ ಬೆಳವಣಿಗೆಗಳು ಕಾಂಗ್ರೆಸ್ ವಲಯದಲ್ಲಿ ರಾಜಕೀಯ ಚರ್ಚೆಗೆ ಗ್ರಾಸ ಒದಗಿಸಿದ್ದು, ತನ್ವೀರ್ ಸೇಠ್ ಅವರ ಮುಂದಿನ ನಡೆ ಏನು ಎಂಬುದು ಕುತೂಹಲ ಕೆರಳಿಸಿದೆ.
