ಮೈಸೂರು: ಪ್ರೀತಿಸುವಂತೆ ಹಟ ಹಿಡಿದ ಯುವಕನೊಬ್ಬ ಪೆಟ್ರೋಲ್ ಸುರಿದುಕೊಂಡು ಯುವತಿಯನ್ನು ಅಪ್ಪಿಕೊಂಡು ಬೆಂಕಿ ಹಚ್ಚಿಕೊಂಡಿರುವ ಘಟನೆ ಮೈಸೂರಿನ ವಿಜಯನಗರದಲ್ಲಿ ನಡೆದಿದೆ.
ಹಾಸ್ಟೆಲ್ನಿಂದ ಕಾಲೇಜಿಗೆ ತೆರಳುತ್ತಿದ್ದ ಯುವತಿಯನ್ನು ಅಡ್ಡಗಟ್ಟಿದ ಯುವಕ, ತನ್ನ ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿ ಯುವತಿಯನ್ನು ಬಲವಂತವಾಗಿ ಅಪ್ಪಿಕೊಂಡಿದ್ದಾನೆ.ಅದೃಷ್ಟವಶಾತ್ ತಕ್ಷಣ ಯುವತಿ ತಪ್ಪಿಸಿಕೊಂಡು ಪ್ರಾಣಾಪಾಯದಿಂದ ಪಾರಾಗಿದ್ದಾಳೆ. ಆದರೆ ಯುವತಿಗೆ ಸ್ವಲ್ಪ ಸುಟ್ಟ ಗಾಯಗಳಾಗಿವೆ. ಯುವಕ ಶೇ.80ರಷ್ಟು ಸುಟ್ಟುಹೋಗಿದ್ದು ಜೀವನ್ಮರಣದ ನಡುವೆ ಹೋರಾಡುತ್ತಿದ್ದಾನೆ.
ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಹಲಗೂರು ಗ್ರಾಮದ ಚಂದನ್ (27) ಸುಟ್ಟುಕೊಂಡ ಯುವಕ. ಅದೇ ಗ್ರಾಮದ ಡಿಪ್ಲೊಮಾ ಇಂಜಿನಿಯರಿಂಗ್ ವಿದ್ಯಾರ್ಥಿನಿಯ ಹಿಂದೆ ಪ್ರೀತಿಸುವಂತೆ ದುಂಬಾಲು ಬಿದ್ದಿದ್ದ.
ಯುವತಿಗೆ ಶೇ.20ರಷ್ಟು ಸುಟ್ಟ ಗಾಯಗಳಾಗಿದ, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ. ಚಂದನ್ ಕೆ.ಆರ್. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಸ್ಥಿತಿ ಗಂಭೀರವಾಗಿದೆ.
ಈ ಸಂಬಂಧ ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
