(ವರದಿ. ಎಸ್. ಪುಟ್ಟಸ್ವಾಮಿ ಹೊನ್ನೂರು)
ಯಳಂದೂರು: ಯಳಂದೂರು ತಾಲೋಕಿನ ಮಾಂಬಳ್ಳಿ ಬಳಿ ಹೆದ್ದಾರಿಯಲ್ಲಿ ಯುವಕನೊಬ್ಬ ಅಪಾಯಕಾರಿ ವ್ಹೀಲಿಂಗ್ ಮಾಡಿ ಸಾರ್ವಜನಿಕರಿಗೆ ಆತಂಕ ಉಂಟುಮಾಡಿದ್ದಾನೆ.
ಯಳಂದೂರು ತಾಲೋಕಿನ ಮಾಂಬಳ್ಳಿ ಗ್ರಾಮದ ರಾಷ್ಟ್ರೀಯ ಹೆದ್ದಾರಿಯಲ್ಲಿ ಯುವಕ ಅಪಾಯಕಾರಿ ರೀತಿಯಲ್ಲಿ ಬೈಕ್ ವ್ಹೀಲಿಂಗ್ ಮಾಡಿದ್ದಾನೆ
ಯುವಕ ವೇಗವಾಗಿ ಬೈಕ್ ಚಲಾಯಿಸಿದ್ದಲ್ಲದೇ, ಹೆದ್ದಾರಿಯಲ್ಲಿ ಮುಂಭಾಗದ ಚಕ್ರವನ್ನು ಮೇಲಕ್ಕೆತ್ತಿ ಅಪಾಯಕಾರಿ ರೀತಿಯಲ್ಲಿ ವ್ಹೀಲಿಂಗ್ ಮಾಡಿ, ಇತರೆ ವಾಹನ ಸವಾರರು ಹಾಗೂ ಸಾರ್ವಜನಿಕರ ಸುರಕ್ಷತೆಗೆ ಅಪಾಯ ಉಂಟಾಗುವಂತೆ ಮಾಡಿದ್ದಾನೆ.
ಯುವಕನ ವ್ಹೀಲಿಂಗ್ ಪುಂಡಾಟಕ್ಕೆ ಸಾರ್ವಜನಿಕರಿಂದ ಆಕ್ಷೇಪ ವ್ಯಕ್ತವಾಗಿದ್ದು, ಇಂತಹ ಅಪಾಯಕಾರಿ ಸಾಹಸಗಳಿಗೆ ಕಡಿವಾಣ ಹಾಕುವಂತೆ ಪೊಲೀಸರನ್ನು ಒತ್ತಾಯಿಸಿದ್ದಾರೆ.
ಈ ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
