ಮೈಸೂರು: ಮೈಸೂರು ಯುವ ದಸರಾ 2026ರ ಉದ್ಘಾಟನಾ ಕಾರ್ಯಕ್ರಮಕ್ಕೆ ಭಾರತದ ಖ್ಯಾತ ನೃತ್ಯಗಾರ, ನೃತ್ಯ ನಿರ್ದೇಶಕ, ನಟ ಹಾಗೂ ಚಿತ್ರ ನಿರ್ದೇಶಕರಾದ ಪ್ರಭುದೇವ ಅವರನ್ನು ಅಧಿಕೃತವಾಗಿ ಆಹ್ವಾನಿಸಲಾಯಿತು.
ಯುವ ದಸರಾ ಸಮಿತಿಯ ಕಾರ್ಯಧ್ಯಕ್ಷ ಸೋಮಶೇಖರ್, ಕಾರ್ಯದರ್ಶಿಗಳಾದ ಅರುಣ್ ಹಾಗೂ ಸತ್ಯಮೂರ್ತಿ ಅವರು ಚೆನ್ನೈನಲ್ಲಿರುವ ಪ್ರಭುದೇವ ಅವರ ನಿವಾಸಕ್ಕೆ ತೆರಳಿ, ಯುವ ದಸರಾ ಕಾರ್ಯಕ್ರಮಕ್ಕೆ ಆಗಮಿಸುವಂತೆ ಅಧಿಕೃತವಾಗಿ ಆಹ್ವಾನಿಸಿದರು.
ಆಹ್ವಾನವನ್ನು ಸಂತೋಷದಿಂದ ಸ್ವೀಕರಿಸಿದ ಪ್ರಭುದೇವ ಅವರು ಯುವ ದಸರಾ ಕಾರ್ಯಕ್ರಮಕ್ಕೆ ಆಗಮಿಸಲು ತಮ್ಮ ಒಪ್ಪಿಗ ವ್ಯಕ್ತಪಡಿಸಿ,ತಮ್ಮನ್ನು ಆಯ್ಕೆ ಮಾಡಿರುವುದಕ್ಕೆ ಖುಷಿ ಪಟ್ಟು ಧನ್ಯವಾದ ಸಲ್ಲಿಸಿದ್ದಾರೆ.
